Tagged: ಯಡಿಯೂರಪ್ಪ

ಇಬ್ಬರು ಕಾಂಗ್ರೆಸ್ ಶಾಸಕರು ಚಕ್ಕರ್!

ಯಡಿಯೂರಪ್ಪ ಸರ್ಕಾರ ಬಹುಮತ ಸಾಬೀತು ಪಡಿಸಲು ಬೇಕಾಗಿದ್ದ ಮ್ಯಾಜಿಕ್ ನಂಬರ್ ಈಗ 110ಕ್ಕೆ ಬಂದು ನಿಂತಿದೆ. 11 ಗಂಟೆಗೆ ಸದನ ಆರಂಭವಾದಗ 222 ಶಾಸಕರ ಪೈಕಿ ಪ್ರಮಾಣವಚನ ಪಡೆಯಲು 219 ಮಂದಿ ಮಾತ್ರ ಆಗಮಿಸಿದ್ದಾರೆ. ಹೀಗಾಗಿ ಸದ್ಯದ ಮ್ಯಾಜಿಕ್ ನಂಬರ್ 110 ಆಗಿದೆ. ವಿಜಯನಗರ ಶಾಸಕರ ಆನಂದ್...

ನಾಳೆ ವಿಶ್ವಾಸ ಮತಯಾಚನೆ?

15 ದಿನದೊಳಗೆ ಬಹುಮತ ಸಾಬೀತು ಪಡಿಸುವಂತೆ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ನೀಡಿದ್ದ ಗಡುವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿರುವುದಾಗಿ ತಿಳಿದುಬಂದಿದೆ. ಸದ್ಯದ ಬ್ರೇಕಿಂಗ್ ನ್ಯೂಸ್ ಪ್ರಕಾರ ನಾಳೆಯೇ ವಿಶ್ವಾಸ ಮತಯಾಚನೆ ಮಾಡುವಂತೆ ನ್ಯಾಯಮೂರ್ತಿಗಳು ಹೇಳಿದ್ದಾರೆ ಎನ್ನಲಾಗುತ್ತಿದೆ. ನ್ಯಾಯಮೂರ್ತಿಗಳ ಈ ಆದೇಶದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ಸದನದಲ್ಲಿ...

ಸಿಎಂ ಆದ ಕೂಡಲೇ ರೈತರ 1 ಲಕ್ಷ ರೂ. ಸಾಲ ಮನ್ನಾ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿದ್ದ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿದ್ದರೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದುವರೆ ಗಂಟೆಯಲ್ಲೇ ರೈತರ ಸಾಲ ಮನ್ನಾ ಮಾಡಿರುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳಲ್ಲಿದ್ದ 1 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿರುವುದಾಗಿ ಬಿಎಸ್ ವೈ ಹೇಳಿದ್ದಾರೆ....

ಸಿಎಂ ಆದ್ರೂ ಸರ್ಕಾರ ರಚನೆ ಮಾಡೋಂಗಿಲ್ಲ!

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ಸರ್ಕಾರ ನಡೆಸದಂತಾಗಿದೆ. ಹೌದು ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರ ಪರಿಣಾಮ ಬಿಎಸ್ ವೈ ಸರ್ಕಾರ ರಚಿಸಲು ಸುಪ್ರೀಂ ತಡೆ ನೀಡಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಎರಡು ಪಕ್ಷಗಳು ಕೋರ್ಟ್ ಮೆಟ್ಟಿಲೇರಿದ್ದವು. ರಾತ್ರಿ 1.45ಕ್ಕೆ ತುರ್ತು...

3ನೇ ಬಾರಿ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ

ಬಿ.ಎಸ್.ಯಡಿಯೂರಪ್ಪ ಅವರು ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ಪ್ರಮಾಣವಚನ ಬೋದಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೆ ಆಸ್ಪದ ನೀಡದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾನಾ ಕಸರತ್ತು ಮಾಡಿದ್ದವು. ಈ ಸಂಬಂಧ ಸುಪ್ರೀಂ ಕೋರ್ಟ್...

ಸಿದ್ದು, ಯಡ್ಡಿ, ಎಚ್ ಡಿಕೆ ಯಾರೂ ಸಿಎಂ ಆಗಲ್ಲ!

ಮೇ 18ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಿದ್ದರೆ, ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಕೂಡ ಮತ್ತೊಮ್ಮೆ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಸದ್ಯದ ರಾಜಕೀಯ ಚಿತ್ರಣ ಗಮನಿಸಿದರೆ ಈ ಮೂವರಲ್ಲಿ ಯಾರೂ ಸಿಎಂ ಆಗೋ ಸಾಧ್ಯತೆ ಇಲ್ಲ ಎಂದೇ ಬಣ್ಣಿಸಲಾಗುತ್ತಿದೆ. ಏಕೆಂದರೆ ಇದೀಗ ನಾನಾ...

ಬಿಎಸ್ ವೈ ಸೇರಿದಂತೆ ಬಿಜೆಪಿ ನಾಯಕರಿಗೆ ಮತ್ತೆ ಸಂಕಷ್ಟ

ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ವೈ, ಜಗದೀಶ್ ಶೆಟ್ಟರ್ ಸೇರಿದಂತೆ ಒಂಬತ್ತು ಮಂದಿಗೆ ಹೈಕೋರ್ಟ್ ನೋಟಿಸ್ ನೀಡುವಂತೆ ಸೂಚಿಸಿದೆ. ಬೆಂಗಳೂರಿನ ಲೊಟ್ಟೆಗೊಲ್ಲಹಳ್ಳಿಯ 14 ಗುಂಟೆ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಜಿ.ವಿ.ಅತ್ರಿ...

ಮತ್ತೆ ತೆನೆಹೊತ್ತ ಪೂಜಾ ಗಾಂಧಿ

ಈ ಹಿಂದೆ ಜೆಡಿಎಸ್ ಸೇರಿ ಬಳಿಕ ಪಕ್ಷ ತೊರೆದಿದ್ದ ಮುಂಗಾರು ಮಳೆ ಹುಡುಗಿ ಪೂಜಾ ಗಾಂಧಿ ಇದೀಗ ಮತ್ತೊಮ್ಮೆ ತೆನೆ ಹೊರಲು ರೆಡಿಯಾಗಿದ್ದಾರೆ. 2012ರಲ್ಲೇ ಜೆಡಿಎಸ್ ಸೇರಿ ನಂತರ ಕೆಲವು ಆಂತರಿಕ ಕಲಹದಿಂದಾಗಿ ಪಕ್ಷದಿಂದ ಹೊರಬಂದಿದ್ದರು. ಇದೀಗ ಮತ್ತೆ ಜೆಡಿಎಸ್ ಸೇರಿ ಸ್ಟಾರ್ ಪ್ರಚಾರಕರಾಗಿ ಹೊರಹೊಮ್ಮಿದ್ದಾರೆ. ಈ...

ಬಿಎಸ್ ವೈ ದಲಿತ ಕೇರಿ ಭೇಟಿಗೆ ವಿರೋಧ

ನೆಲಮಂಗಲದ ಮೈಲನಹಳ್ಳಿ ಗ್ರಾಮದ ದಲಿತ ಕೇರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಉಪಹಾರ ಸೇವಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಆದರೆ ಈ ಕಾರ್ಯಕ್ರಮಕ್ಕೆ ಕೆಲವು ದಲಿತರು ವಿರೋಧ ವ್ಯಕ್ತಪಡಿಸುತ್ತಿರುವುದು ಬಿಜೆಪಿಗೆ ತಲೆನೋವಾಗಿದೆ. ಅಂಬೇಡ್ಕರ್ ಹೆಸರು ಹೇಳಿಕೊಂಡು ಈಗ ದಲಿತ ಕೇರಿಗೆ ಬರುವ ಬಿಜೆಪಿ ಮಂದಿ ಇಷ್ಟು...

ಬಿಎಸ್ ವೈ ಕ್ಷೇತ್ರದಲ್ಲಿ ರಾಹುಲ್ ದಂಡಯಾತ್ರೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೂರೇ ತಿಂಗಳಲ್ಲಿ ಐದನೇ ಬಾರಿಗೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿಂದಿನ ಪ್ರವಾಸದಲ್ಲಿ ಟೆಂಪಲ್ ರನ್ ಮಾಡಿದ್ದ ರಾಹುಲ್ ಗಾಂಧಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತವರೂರು ಶಿವಮೊಗ್ಗದಲ್ಲಿ ಭಾರಿ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಒಂದು ಕಡೆ ಕಾಂಗ್ರೆಸ್ ಭದ್ರಕೋಟೆಗೆ ಬಿಜೆಪಿ...